2 Chronicles 23:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾದನು ಸೇನಾಧಿಪತಿಗಳಿಗೂ ಅಧಿಪತಿಗಳಿಗೂ ಎಲ್ಲಾ ಜನರಿಗೂ ತನ್ನನ್ನು ಹಿಂಬಾಲಿಸುವಂತೆ ಹೇಳಿ, ಅರಸನನ್ನು ದೇವಾಲಯದೊಳಗಿಂದ ಹೊರತಂದನು. ಅವರೆಲ್ಲಾ ಮೇಲಿನ ಬಾಗಿಲಿನ ಮೂಲಕ ರಾಜನಿವಾಸಕ್ಕೆ ಹೋದರು. ಅಲ್ಲಿ ರಾಜನನ್ನು ಸಿಂಹಾಸನದಲ್ಲಿ ಕುಳ್ಳಿರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
Kannada BSI Bible 2016
ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ಶತಾಧಿಪತಿಗಳು ಶ್ರೀಮಂತರು ಜನನಾಯಕರು ಸಾಧಾರಣಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
Kannada Bible (KNCL) BSI 2016
ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.