2 Chronicles 23:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತತಿಯವರಿಗೆ ಮಾಡಿದ ವಾಗ್ದಾನದ ಪ್ರಕಾರ ಅರಸನಾಗತಕ್ಕವನು ಇವನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.
Kannada BSI Bible 2016
ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಿಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಯೆಹೋಯಾದನು ಅವರಿಗೆ - ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅರಸನಾಗತಕ್ಕವನು ಇವನೇ.
Kannada Bible (KNCL) BSI 2016
ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.