2 Chronicles 23:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾರನ್ನೂ ದೇವಾಲಯದೊಳಕ್ಕೆ ಬಿಡಬಾರದು. ಶುದ್ಧಮಾಡಲ್ಪಟ್ಟ ಯಾಜಕರು ಮತ್ತು ಲೇವಿಯರು ಮಾತ್ರ ದೇವರ ಸೇವೆಮಾಡುವದಕ್ಕಾಗಿ ಆಲಯದೊಳಗೆ ಬರುವರು. ಉಳಿದವರು ಯೆಹೋವನು ತಮಗೆ ಕೊಟ್ಟ ಕೆಲಸಗಳನ್ನು ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.
Kannada BSI Bible 2016
ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರೂ ಸೇವೆಯಲ್ಲಿರುವ ಲೇವಿಯರೂ ಹೊರತಾಗಿ ಯಾರೂ ಯೆಹೋವನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಆಜ್ಞಾನುಸಾರವಾಗಿ ಹೊರಗಿರಬೇಕು.
Kannada Bible (KNCL) BSI 2016
ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.