2 Chronicles 23:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನಾದ ಯೆಹೋಯಾದನು ಆಜ್ಞಾಪಿಸಿದಂತೆ ಲೇವಿಯರೂ ಯೆಹೂದದ ಜನರೂ ಮಾಡಿದರು. ಆದ್ದರಿಂದ ಪ್ರತಿಯೊಬ್ಬ ಸೇನಾಧಿಪತಿಯು ತನ್ನ ಕೈ ಕೆಳಗೆ ಸಬ್ಬತ್‌ದಿನದಲ್ಲಿ ಕೆಲಸಮಾಡಲು ಹೋಗುತ್ತಿದ್ದವರನ್ನು ಮತ್ತು ಸಬ್ಬತ್ ದಿನದ ಕೆಲಸ ಮುಗಿಸಿಕೊಂಡು ಬರುತ್ತಿದ್ದವರನ್ನು ಕೂಡಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.
Kannada BSI Bible 2016
ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರೂ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು [ಸಬ್ಬತ್ ದಿವಸದಲ್ಲಿ ಸೇವಾ ವಿಮುಕ್ತರಾದ] ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದದರಿಂದ ಪ್ರತಿಯೊಬ್ಬನು ಸಬ್ಬತ್‍ದಿವಸ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಕೂಡಿಸಿಕೊಂಡನು.
Kannada Bible (KNCL) BSI 2016
ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್‍ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್‍ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.