2 Chronicles 23:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನಾದ ಯೆಹೋಯಾದನು ಅವರಿಗೆ ಬರ್ಜಿಯನ್ನೂ ದೊಡ್ಡ ಮತ್ತು ಚಿಕ್ಕ ಗುರಾಣಿಗಳನ್ನೂ ಕೊಟ್ಟನು. ಅವು ರಾಜನಾದ ದಾವೀದನಿಗೆ ಸೇರಿದವುಗಳಾಗಿದ್ದವು. ಅವು ದೇವಾಲಯದೊಳಗೆ ಇಡಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
Kannada BSI Bible 2016
ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ ಗುರಾಣಿ ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟು
Kannada Bible (KNCL) BSI 2016
ದೇವಾಲಯದಲ್ಲಿಟ್ಟಿದ್ದ ದಾವೀದ ಅರಸನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,