2 Chronicles 24:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಯಾದನು ಮತ್ತು ರಾಜನು ದೇವಾಲಯವನ್ನು ದುರಸ್ತಿ ಮಾಡುವವರ ಕೈಗೆ ಅದನ್ನು ಕೊಟ್ಟರು. ಅವರು ಮರದ ಕುಶಲಕರ್ಮಿಗಳನ್ನೂ ಬಡಗಿಗಳನ್ನೂ ದೇವಾಲಯವನ್ನು ಸರಿಪಡಿಸಲು ನೇಮಿಸಿದರು. ಅಲ್ಲದೆ ತಾಮ್ರಕಬ್ಬಿಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನೂ ಕೆಲಸಕ್ಕೆ ನೇಮಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.
Kannada BSI Bible 2016
ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡಿಸುವವರಿಗೆ ಒಪ್ಪಿಸಿದರು. ಇವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು.
Kannada Bible (KNCL) BSI 2016
ಅರಸನೂ ಯೆಹೋಯಾದನೂ ಅದನ್ನು ಸರ್ವೇಶ್ವರನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಇವರು ಸರ್ವೇಶ್ವರನ ಆಲಯದ ದುರಸ್ತಿ ಕೆಲಸಕ್ಕಾಗಿ, ಶಿಲ್ಪಿಗಾರರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು.