2 Chronicles 24:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.
Kannada BSI Bible 2016
ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.
Kannada Bible (KNCL) BSI 2016
ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.