2 Chronicles 24:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
Kannada BSI Bible 2016
ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.
Kannada Bible (KNCL) BSI 2016
ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.