2 Chronicles 24:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಅವರನ್ನು ತನ್ನ ಕಡೆಗೆ ತಿರುಗಿಕೊಳ್ಳುವಂತೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಪ್ರವಾದಿಗಳು ಜನರನ್ನು ಎಚ್ಚರಿಸಿದರೂ ಅವರ ಮಾತುಗಳಿಗೆ ಅವರು ಗಮನಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
Kannada BSI Bible 2016
ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
Kannada Bible (KNCL) BSI 2016
ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.