2 Chronicles 24:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
Kannada BSI Bible 2016
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.
Kannada Bible (KNCL) BSI 2016
ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.