2 Chronicles 24:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ಬಂತು. ಅವರು ಯೆಹೂದದೇಶ ಮತ್ತು ಜೆರುಸಲೇಮಿನ ಮೇಲೆ ದಾಳಿ ಮಾಡಿ ಎಲ್ಲಾ ನಾಯಕರನ್ನು ಸಂಹರಿಸಿದರು. ಅಲ್ಲಿದ್ದ ಬೆಲೆಬಾಳುವ ಎಲ್ಲಾ ವಸ್ತುಗಳನ್ನು ದಮಸ್ಕದ ಅರಸನಿಗೆ ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.
Kannada BSI Bible 2016
ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ವರುಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರೋಧವಾಗಿ ಹೊರಟಿತು. ಆ ಸೈನ್ಯದವರು ಯೆಹೂದದೇಶದೊಳಗೆ ನುಗ್ಗಿ ಯೆರೂಸಲೇವಿುಗೆ ಬಂದು ಇಸ್ರಾಯೇಲ್ಯರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
Kannada Bible (KNCL) BSI 2016
ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.