2 Chronicles 24:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
Kannada BSI Bible 2016
ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಅವನನ್ನು ಬಿಟ್ಟುಹೋದಕೂಡಲೆ ಅವನ ಸೇವಕರು ಯಾಜಕನಾದ ಯೆಹೋಯಾದನ ಮಗನ ವಧೆಯ ನಿವಿುತ್ತ ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಕಠಿನ ರೋಗದಲ್ಲಿದ್ದ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.
Kannada Bible (KNCL) BSI 2016
ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.