2 Chronicles 24:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅರಸನಾದ ಯೆಹೋವಾಷನು ಮಹಾಯಾಜಕನಾದ ಯೆಹೋಯಾದನನ್ನು ಕರೆದು, “ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಯೆಹೂದ ಮತ್ತು ಜೆರುಸಲೇಮಿನ ಜನರಿಂದ ಲೇವಿಯರು ಸಂಗ್ರಹಿಸಿಕೊಂಡು ಬರಲು ನೀನೇಕೆ ಅವರನ್ನು ಒತ್ತಾಯಿಸಲಿಲ್ಲ? ಮೋಶೆಯೂ ಇಸ್ರೇಲರೂ ಆ ಹಣವನ್ನು ಪವಿತ್ರ ಗುಡಾರಕ್ಕಾಗಿ ಉಪಯೋಗಿಸುತ್ತಿರಲಿಲ್ಲವೇ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
Kannada BSI Bible 2016
ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಲೇವಿಯರು ಅವಸರ ಪಡಲಿಲ್ಲ. ಆದದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರಿಸಿ ಅವನಿಗೆ - ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲಾ ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇವಿುನವರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
Kannada Bible (KNCL) BSI 2016
ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.