2 Chronicles 24:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ ಮತ್ತು ಜೆರುಸಲೇಮಿನಲ್ಲಿ ಲೇವಿಯರು ಜನರಿಗೆಲ್ಲಾ ತಮ್ಮ ತಮ್ಮ ತೆರಿಗೆ ಹಣವನ್ನು ತಂದು ದೇವರಿಗೆ ಸಮರ್ಪಿಸುವಂತೆ ಪ್ರಕಟಿಸಿದರು. ಇಸ್ರೇಲರು ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಿರುವಾಗ ದೇವರ ಸೇವಕನಾದ ಮೋಶೆಯು ಜನರಿಗೆ ಇದನ್ನು ಆಜ್ಞಾಪಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
Kannada BSI Bible 2016
ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬದಾಗಿ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಪ್ರಕಟಿಸಿದನು.
Kannada Bible (KNCL) BSI 2016
ದೇವರ ದಾಸ ಮೋಶೆಯು ಮರುಭೂಮಿಯಲ್ಲಿ ವಿಧಿಸಿದಂತೆ ಇಸ್ರಯೇಲರು ಸರ್ವೇಶ್ವರನಿಗೆ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬುದಾಗಿ ಜುದೇಯದಲ್ಲೂ ಜೆರುಸಲೇಮಿನಲ್ಲೂ ಪ್ರಕಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.