2 Chronicles 25:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್. ಆಕೆ ಜೆರುಸಲೇಮಿನವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.
Kannada BSI Bible 2016
ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಯೆರೂಸಲೇವಿುನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.
Kannada Bible (KNCL) BSI 2016
ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಹೋವದ್ಧಾನ್ ಎಂಬಾಕೆ ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.