2 Chronicles 25:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು.
Kannada BSI Bible 2016
ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಮಚ್ಯನು ಎಫ್ರಾಯೀಮ್ಯರಿಂದ ಬಂದ ಸೈನಿಕರನ್ನು ಬೇರೆ ಮಾಡಿ ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹುಕೋಪಗೊಂಡು ಬಲುಸಿಟ್ಟಿನಿಂದ ತಮ್ಮ ದೇಶಕ್ಕೆ ಹೋದರು.
Kannada Bible (KNCL) BSI 2016
ಆಗ ಅಮಚ್ಯನು ಎಫ್ರಯಿಮರಿಂದ ಬಂದ ಸೈನಿಕರನ್ನು ಬೇರೆಮಾಡಿ, ಅವರನ್ನು ಅವರ ನಾಡಿಗೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಕಡುಕೋಪಗೊಂಡು, ಬಲುಸಿಟ್ಟಿನಿಂದ ತಮ್ಮ ನಾಡಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಮಚ್ಯನು ಎಫ್ರಾಯೀಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವರನ್ನು ಕಳುಹಿಸಿಬಿಟ್ಟನು. ಆದಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪಗೊಂಡವರಾಗಿ ತಮ್ಮ ಮನೆಗೆ ತಿರುಗಿದರು.