2 Chronicles 25:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮಚ್ಯನು ಧೈರ್ಯಗೊಂಡು ತನ್ನ ಸೈನ್ಯವನ್ನು ಎದೋಮ್ ರಾಜ್ಯದ ಉಪ್ಪಿನ ಕಣಿವೆಗೆ ನಡಿಸಿದನು. ಆ ಸ್ಥಳದಲ್ಲಿ ಅವನ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಕೊಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.
Kannada BSI Bible 2016
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರಕೊಂಡು ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.
Kannada Bible (KNCL) BSI 2016
ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ಕಣಿವೆಗೆ ಹೋಗಿ, ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.