2 Chronicles 25:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಸೈನಿಕರು ಸೇಯೀರಿನ ಹತ್ತುಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿದಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅಪ್ಪಳಿಸಿದಾಗ ಅವರ ದೇಹಗಳು ಚೂರುಚೂರಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.
Kannada BSI Bible 2016
ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು ಕಡಿದಾದ ಬಂಡೆಯ ತುದಿಗೆ ಒಯ್ದು ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.
Kannada Bible (KNCL) BSI 2016
ಯೆಹೂದ್ಯರು ಬೇರೆ ಹತ್ತು ಸಾವಿರಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದ್ಯರು ಸೆರೆಯಾಗಿ ಒಯ್ದು, ಬಂಡೆಯ ಶಿಖರಕ್ಕೆ ಅವರನ್ನು ಕರೆದುಕೊಂಡು ಹೋಗಿ, ಅಲ್ಲಿಂದ ಅವರನ್ನು ದಬ್ಬಿ ಸಾಯಿಸಿದರು.