2 Chronicles 25:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಷನು ಇಸ್ರೇಲಿನ ಅರಸನಾಗಿದ್ದನು. ಅವನು, “ಲೆಬನೋನಿನ ಒಂದು ಚಿಕ್ಕ ಮುಳ್ಳುಗಿಡವು ಲೆಬನೋನಿನ ದೇವದಾರು ಮರಕ್ಕೆ ಸಂದೇಶವನ್ನು ಕಳುಹಿಸಿತು. ಮುಳ್ಳುಗಿಡವು ಹೀಗೆ ಹೇಳಿತು: ‘ನಿನ್ನ ಮಗಳು ನನ್ನ ಮಗನನ್ನು ಮದುವೆ ಮಾಡಿಕೊಳ್ಳಲಿ.’ ಆದರೆ ಒಂದು ಕಾಡುಮೃಗ ಬಂದು ಮುಳ್ಳುಗಿಡವನ್ನು ತುಳಿದು ನಾಶಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.
Kannada BSI Bible 2016
ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು.
Kannada Bible (KNCL) BSI 2016
ಆಗ ಇಸ್ರಯೇಲರ ಅರಸ ಯೋವಾಷನು ಯೆಹೂದ್ಯರ ಅರಸ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡ ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ, ಲೆಬನೋನಿನ ಒಂದು ಕಾಡುಮೃಗ ಆ ಮಾರ್ಗವಾಗಿ ಹಾದುಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.