2 Chronicles 25:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬ ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು. ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.
Kannada BSI Bible 2016
ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಹ, ಎದೋಮ್ಯರನ್ನು ಸೋಲಿಸಿ ಬಹುಕೀರ್ತಿಯನ್ನು ಪಡಕೊಂಡೆನಲ್ಲಾ ಎಂದು ನೀನು ಹೆಮ್ಮೆಗೊಂಡಿದ್ದೀ; ಸುಮ್ಮನೆ ಮನೆಯಲ್ಲಿ ಕೂತುಕೊಳ್ಳಬಾರದೇ; ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಯಾಕೆ ಕೇಡನ್ನು ತಂದುಕೊಳ್ಳುತ್ತೀ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.