2 Chronicles 25:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,
Kannada BSI Bible 2016
ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡು ಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಬಿಟ್ಟನು.
Kannada Bible (KNCL) BSI 2016
ಇಸ್ರಯೇಲರ ಅರಸ ಯೋವಾಷನು, ಯೆಹೋವಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆಹಿಡಿದನು. ಅವನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ಗೋಡೆಯನ್ನು ಸುಮಾರು ಇನ್ನೂರು ಮೀಟರಿನಷ್ಟು ಕೆಡವಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.