2 Chronicles 25:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದೊಳಗೆ ಬೆಳ್ಳಿಬಂಗಾರಗಳು ಮತ್ತು ಬೆಲೆಯುಳ್ಳ ವಸ್ತುಗಳಿದ್ದವು. ಓಬೇದೆದೋಮನು ಅವುಗಳ ಮೇಲ್ವಿಚಾರಕನಾಗಿದ್ದನು. ಯೋವಾಷಾನು ಅವೆಲ್ಲವನ್ನೂ ಅರಮನೆಯಲ್ಲಿದ್ದ ನಿಕ್ಷೇಪವನ್ನೂ ಸೂರೆಮಾಡಿ ಕೆಲಜನರನ್ನು ಸೆರೆಹಿಡಿದು ಎಲ್ಲವನ್ನು ಸಮಾರ್ಯಕ್ಕೊಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು, ಪಾತ್ರೆಗಳನ್ನು, ಅರಸನ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
Kannada BSI Bible 2016
ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲಾ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಅರಮನೆಯ ಭಂಡಾರಗಳಲ್ಲಿದ್ದದ್ದೆಲ್ಲವನ್ನೂ ತೆಗೆದುಕೊಂಡು ಹೊಣೆಗಾರರನ್ನಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
Kannada Bible (KNCL) BSI 2016
ಇದಲ್ಲದೆ, ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನೂ ತೆಗೆದುಕೊಂಡು, ಹೊಣೆಗಾರರನ್ನಾಗಿ ಕೆಲವರನ್ನು ಸೆರೆಹಿಡಿದು ಸಮಾರಿಯಕ್ಕೆ ಹಿಂದಿರುಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಓಬೇದ್ ಏದೋಮನ ಬಳಿಯಲ್ಲಿ ಯೆಹೋವ ದೇವರ ಆಲಯದಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ, ಅರಮನೆಯ ಬೊಕ್ಕಸಗಳನ್ನೂ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.