2 Chronicles 25:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
Kannada BSI Bible 2016
ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮಚ್ಯನು ಯೆಹೋವ ಭಕ್ತಿಯನ್ನು ಬಿಟ್ಟಂದಿನಿಂದ ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡುತ್ತಿದ್ದರು. ಆದದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
Kannada Bible (KNCL) BSI 2016
ಅಮಚ್ಯನು ಸರ್ವೇಶ್ವರನ ಭಕ್ತಿಯನ್ನು ಬಿಟ್ಟಂದಿನಿಂದ ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡುತ್ತಿದ್ದರು. ಆದುದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.