2 Chronicles 25:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕೆಂದರೆ “ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆಯಾಗಬೇಕು”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Kannada BSI Bible 2016
ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು ಎಂಬದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Kannada Bible (KNCL) BSI 2016
ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅಮಚ್ಯನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.