2 Chronicles 25:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮಚ್ಯನು ಯೆಹೂದ ಪ್ರಾಂತ್ಯದ ಜನರನ್ನು ಒಟ್ಟುಗೂಡಿಸಿ ಅವರನ್ನು ಕುಟುಂಬಗಳಿಗನುಸಾರವಾಗಿ ವಿಭಾಗ ಮಾಡಿದನು. ಈ ಗುಂಪುಗಳಿಗೆ ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು. ಇವರು ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಗಳಲ್ಲಿ ಇಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರನ್ನು ಸೈನಿಕರನ್ನಾಗಿ ಆರಿಸಿದರು. ಒಟ್ಟು ಮೂರು ಲಕ್ಷ ಸೈನಿಕರು ಬರ್ಜಿ ಗುರಾಣಿಗಳೊಂದಿಗೆ ಯುದ್ಧ ಮಾಡಲು ನುರಿತರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.
Kannada BSI Bible 2016
ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿ ಕೊಂಡು ಯೆಹೂದ ಬೆನ್ಯಾವಿಾನ್ಯರೆಲ್ಲರಲ್ಲಿ ತಮ್ಮ ಪಿತೃ ಗಳ ಮನೆಗಳ ಪ್ರಕಾರ ಅವರನ್ನು ಸಹಸ್ರಗಳ ಮೇಲೆ ಅಧಿಪತಿಗಳಾಗಿಯೂ ಶತಗಳ ಮೇಲೆ ಅಧಿಪತಿಗಳಾ ಗಿಯೂ ಮಾಡಿದನು. ಅವನು ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರನ್ನು ಲೆಕ್ಕಿಸಿ ಆದುಕೊಂಡಂಥ, ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ ಖೇಡ್ಯವನ್ನೂ ಹಿಡಿದುಕೊಂಡಿರುವಂಥ ಮೂರು ಲಕ್ಷ ಮಂದಿಯನ್ನು ಕಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅಮಚ್ಯನು ಯೆಹೂದ್ಯರನ್ನು ಕೂಡಿಸಿ ಸಹಸ್ರಾಧಿಪತಿ ಶತಾಧಿಪತಿಗಳ ಕೈಕೆಳಗೆ ಕೊಟ್ಟು ಯೆಹೂದ ಬೆನ್ಯಾಮೀನ್ ಕುಲಗಳಲ್ಲಿನ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ ಇಪ್ಪತ್ತು ವರುಷದವರು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಲೆಕ್ಕಮಾಡಲು ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.
Kannada Bible (KNCL) BSI 2016
ಆಮೇಲೆ ಅಮಚ್ಯನು ಯೆಹೂದ್ಯರನ್ನು ಸಹಸ್ರಾಧಿಪತಿ ಹಾಗು ಶತಾಧಿಪತಿಗಳ ಕೈಕೆಳಗೆ ಒಟ್ಟುಗೂಡಿಸಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರನ್ನು ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರನ್ನು ಲೆಕ್ಕಮಾಡಿಸಿದನು. ಅವರಲ್ಲಿ ಬರ್ಜಿ, ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷಮಂದಿ ಸಿಕ್ಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.