2 Chronicles 25:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.
Kannada BSI Bible 2016
ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ - ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲ್ಯರನ್ನೆಲ್ಲಾ ಕೈಬಿಟ್ಟಿದ್ದಾನೆ.
Kannada Bible (KNCL) BSI 2016
ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.