2 Chronicles 25:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಿನ್ನನ್ನು ಬಲಿಷ್ಠನನ್ನಾಗಿ ಮಾಡಿಕೊಂಡಿದ್ದರೂ ನಿನ್ನ ಸೋಲು ಮತ್ತು ನಿನ್ನ ಜಯ ದೇವರ ಕೈಯಲ್ಲಿವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.
Kannada BSI Bible 2016
ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ಹೋಗಿ ಕಾರ್ಯವನ್ನು ನಡಿಸು; ಧೈರ್ಯದಿಂದ ಯುದ್ಧಮಾಡು. [ಹಾಗೆ ಮಾಡದಿದ್ದರೆ] ದೇವರು ಶತ್ರುಗಳಿಂದ ನಿನ್ನನ್ನು ಅಪಜಯಪಡಿಸುವನು. ಜಯಾಪಜಯಗಳನ್ನುಂಟುಮಾಡುವದಕ್ಕೆ ಆತನು ಶಕ್ತನಾಗಿರುತ್ತಾನಲ್ಲಾ ಅಂದನು.
Kannada Bible (KNCL) BSI 2016
ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.