2 Chronicles 26:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
Kannada BSI Bible 2016
ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವದಕ್ಕಾಗಿ ಜಾಣರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ ಅವುಗಳನ್ನು ಯೆರೂಸಲೇವಿುನಲ್ಲಿ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದನು. ಅವನು ಬಲಿಷ್ಠನಾಗುವವರೆಗೂ ದೇವರ ಆಶ್ಚರ್ಯವಾದ ಸಹಾಯವನ್ನು ಹೊಂದಿದನು; ಅವನ ಕೀರ್ತಿಯು ದೂರದವರೆಗೆ ಹಬ್ಬಿತು.
Kannada Bible (KNCL) BSI 2016
ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವುದಕ್ಕಾಗಿ, ತಜ್ಞರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ, ಅವುಗಳನ್ನು ಜೆರುಸಲೇಮಿನ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದ್ದನು. ಬಲಿಷ್ಠನಾಗುವವರೆಗೂ ಅವನ ದೇವರ ಸಹಾಯವನ್ನು ಆಶ್ಚರ್ಯಕರವಾದ ರೀತಿಯಲ್ಲಿ ಪಡೆಯುತ್ತಿದ್ದನು; ಅವನ ಕೀರ್ತಿ ಬಲು ದೂರದವರೆಗೆ ಹಬ್ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.