2 Chronicles 26:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
Kannada BSI Bible 2016
ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದಕಾರಣ ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿದದರಿಂದ ಅವನೂ ಶೀಘ್ರವಾಗಿ ಹೊರಗೆ ಹೋದನು.
Kannada Bible (KNCL) BSI 2016
ಮಹಾಯಾಜಕನಾದ ಅಜರ್ಯನೂ ಎಲ್ಲ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠ ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಗಟ್ಟಿದರು. ಸರ್ವೇಶ್ವರ, ತನ್ನನ್ನು ದಂಡಿಸಿದ್ದಾರೆಂದು ಅವನಿಗೆ ತಿಳಿಯಿತು. ಎಂದೇ ಅವನು ಶೀಘ್ರವಾಗಿ ಹೊರಗೆಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.