2 Chronicles 26:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾವುನು ಪ್ರಜಾಪಾಲನೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
Kannada BSI Bible 2016
ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೋಗಿಯಾಗಿದ್ದು ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜ ಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
Kannada Bible (KNCL) BSI 2016
ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.