2 Chronicles 26:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಜ್ಜೀಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ ಶವವನ್ನು ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೀಯನ ಬದಲಾಗಿ ಅವನ ಮಗನಾದ ಯೋತಾವುನು ಅರಸನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
Kannada BSI Bible 2016
ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಜ್ಜೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು ರಾಜಕುಟುಂಬಶ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
Kannada Bible (KNCL) BSI 2016
ಉಜ್ಜೀಯನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು, ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೋತಾಮನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.