2 Chronicles 26:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
Kannada BSI Bible 2016
ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
Kannada Bible (KNCL) BSI 2016
ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.