2 Chronicles 26:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿ ಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
Kannada BSI Bible 2016
ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
Kannada Bible (KNCL) BSI 2016
ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.