2 Chronicles 26:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪಕಾಣಿಕೆಯನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
Kannada BSI Bible 2016
ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುವವರಾದರು. ಅವನು ಅಧಿಕಬಲವುಳ್ಳವನಾದದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
Kannada Bible (KNCL) BSI 2016
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.