2 Chronicles 27:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋತಾವುನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
Kannada BSI Bible 2016
ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ [ಅವನಂತೆ] ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
Kannada Bible (KNCL) BSI 2016
ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಅವನ ತಂದೆಯಂತೆ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಲಿಲ್ಲ. ಆಗ ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.