2 Chronicles 28:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಯೋಚಿಸುತ್ತಿದ್ದೀರಿ. ನೀವು ಕೂಡ ಯೆಹೋವನಿಗೆ ವಿರೋಧವಾಗಿ ಪಾಪಮಾಡಲಿಲ್ಲವೇ? ಹೀಗೆ ಮಾಡುವದರಿಂದ ನೀವು ಸಹ ದೇವರ ದೃಷ್ಟಿಯಲ್ಲಿ ಪಾಪಮಾಡುತ್ತಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?
Kannada BSI Bible 2016
ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಸಾಲದೆ ನೀವು ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೋ?
Kannada Bible (KNCL) BSI 2016
ಇದೂ ಸಾಲದೆಂದು ನೀವು ಯೆಹೂದ್ಯರನ್ನೂ ಜೆರುಸಲೇಮನ್ನೂ ಬಲಾತ್ಕರಿಸಿ ದಾಸದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ಅಪರಾಧಗಳನ್ನು ನೀವೂ ಮಾಡಿದ್ದೀರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?