2 Chronicles 28:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರುಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.
Kannada BSI Bible 2016
ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆಹಾಜನು ದೇವಾಲಯದ ಸಾಮಾನುಗಳನ್ನು ಕೂಡಿಸಿ ಅವುಗಳನ್ನು ಕತ್ತರಿಸಿಬಿಟ್ಟನು; ಯೆಹೋವನ ಆಲಯದ ಬಾಗಲುಗಳನ್ನು ಮುಚ್ಚಿ ಯೆರೂಸಲೇವಿುನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.
Kannada Bible (KNCL) BSI 2016
ಇದಲ್ಲದೆ, ಅಹಾಜನು ದೇವಾಲಯದ ಸಾಮಗ್ರಿಗಳನ್ನು ಕೂಡಿಸಿ, ಅವುಗಳನ್ನು ಚೂರುಚೂರು ಮಾಡಿಬಿಟ್ಟನು; ಸರ್ವೇಶ್ವರನ ಆಲಯದ ಬಾಗಿಲುಗಳನ್ನು ಮುಚ್ಚಿ ಜೆರುಸಲೇಮಿನ ಪ್ರತಿಯೊಂದು ಮೂಲೆಯಲ್ಲೂ ಯಜ್ಞವೇದಿಗಳನ್ನು ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.