2 Chronicles 28:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
Kannada BSI Bible 2016
ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್‍ರಾಜಶ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯನು ಅರಸನಾದನು.
Kannada Bible (KNCL) BSI 2016
ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.