2 Chronicles 28:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.
Kannada BSI Bible 2016
ಇದಲ್ಲದೆ ಅವನು ಬೆನ್‌ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬೆನ್‍ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಆಹುತಿಕೊಟ್ಟನು.
Kannada Bible (KNCL) BSI 2016
ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.