2 Chronicles 28:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತಸ್ಥಳಗಳಲ್ಲಿ ಧೂಪಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.
Kannada BSI Bible 2016
ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೂ ಎಲ್ಲಾ ಹಸುರು ಮರಗಳ ಕೆಳಗೂ ಯಜ್ಞಗಳನ್ನೂ ಧೂಪಗಳನ್ನೂ ಸಮರ್ಪಿಸಿದನು.
Kannada Bible (KNCL) BSI 2016
ಪೂಜಾಸ್ಥಳಗಳಲ್ಲೂ, ದಿನ್ನೆಗಳ ಮೇಲೂ ಹಾಗು ಎಲ್ಲ ಹಸಿರು ಮರಗಳ ಕೆಳಗೂ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.