2 Chronicles 28:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮಿನ ಜಿಕ್ರಿಯು ಧೈರ್ಯಶಾಲಿಯಾದ ಸಿಪಾಯಿ. ಅವನು ಅರಸನಾದ ಆಹಾಜನ ಮಗನಾದ ಮಾಸೇಯನನ್ನು, ಅರಮನೆಯ ಅಧಿಕಾರಿಯಾದ ಅಜ್ರೀಕಾಮನನ್ನು ಮತ್ತು ಅಧಿಕಾರದಲ್ಲಿ ಅರಸನಿಗೆ ಎರಡನೆಯವನಾಗಿದ್ದ ಎಲ್ಕಾನನನ್ನು ಕೊಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.
Kannada BSI Bible 2016
ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.
Kannada Bible (KNCL) BSI 2016
ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಯಿಮ್ ನಾಡಿನ ಜಿಕ್ರಿಯೆಂಬ ಶೂರನು ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.