2 Chronicles 28:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು.
Kannada BSI Bible 2016
ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು ಸಮಾರ್ಯಕ್ಕೆ ಒಯ್ದರು.
Kannada Bible (KNCL) BSI 2016
ಇದಲ್ಲದೆ, ಇಸ್ರಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು, ಸಮಾರಿಯಕ್ಕೆ ಒಯ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.