2 Chronicles 29:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
Kannada BSI Bible 2016
ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅರಸನ ಆಜ್ಞಾಧಾರಕರಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವದಕ್ಕೆ ಬಂದರು.
Kannada Bible (KNCL) BSI 2016
ಎಂಬ ಲೇವಿಯರು ಮುಂದೆ ಬಂದು ತಮ್ಮ ಸಹೋದರರನ್ನು ಒಂದುಗೂಡಿಸಿದರು. ಅವರು ಅರಸನ ಆಜ್ಞಾಧಾರಕರಾಗಿ ಸರ್ವೇಶ್ವರನ ಧರ್ಮಶಾಸ್ತ್ರವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಸರ್ವೇಶ್ವರನ ಆಲಯವನ್ನು ಶುದ್ಧೀಕರಿಸುವುದಕ್ಕೆ ಸಿದ್ಧರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.