2 Chronicles 29:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಲೇವಿಯರು ಪವಿತ್ರ ಸೇವೆಯನ್ನು ಮಾಡಲು ಸಿದ್ಧರಾದರು. ತಿಂಗಳಿನ ಎಂಟನೆಯ ದಿನದಲ್ಲಿ ದೇವಾಲಯದ ಮಂಟಪಕ್ಕೆ ಲೇವಿಯರು ಬಂದರು. ಎಂಟು ದಿನಗಳಲ್ಲಿ ಅವರು ದೇವಾಲಯವನ್ನೆಲ್ಲಾ ಶುಚಿಮಾಡಿದರು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಅವರು ಶುಚಿಮಾಡುವ ಕಾರ್ಯವನ್ನು ಮುಗಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
Kannada BSI Bible 2016
ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮೊದಲನೆಯ ತಿಂಗಳಿನ ಮೊದನೆಯ ದಿನದಲ್ಲಿ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಯೆಹೋವನ ಆಲಯವನ್ನು ಶುದ್ಧಪಡಿಸುವದರಲ್ಲಿ ಎಂಟು ದಿನಗಳು ಕಳೆದುಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ತೀರಿತು.
Kannada Bible (KNCL) BSI 2016
ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಈ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಸರ್ವೇಶ್ವರನ ಆಲಯದ ಮಂಟಪಕ್ಕೆ ಕೈಹಾಕಿದರು; ಹೀಗೆ ಸರ್ವೇಶ್ವರನ ಆಲಯವನ್ನು ಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು.