2 Chronicles 29:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
Kannada BSI Bible 2016
ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಹಿಜ್ಕೀಯನು [ಮರುದಿನ] ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
Kannada Bible (KNCL) BSI 2016
ಅರಸ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಸರ್ವೇಶ್ವರನ ಆಲಯಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು, ಪಟ್ಟಣದ ಪ್ರಧಾನರನ್ನು ಕೂಡಿಸಿ, ಯೆಹೋವ ದೇವರ ಆಲಯಕ್ಕೆ ಹೋದನು.