2 Chronicles 29:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
Kannada BSI Bible 2016
ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.