2 Chronicles 29:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಹೋರಿಗಳನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು. ಅನಂತರ ಕುರಿಮರಿಗಳನ್ನು ವಧಿಸಿ ಅದರ ರಕ್ತವನ್ನೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
Kannada BSI Bible 2016
ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಎರಚಿದರು. ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿದರು. ಆಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಎರಚಿದರು.
Kannada Bible (KNCL) BSI 2016
ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ರಕ್ತವನ್ನು ಕೂಡಿಸಿ ಬಲಿಪೀಠಕ್ಕೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಬಲಿಪೀಠಕ್ಕೆ ಪ್ರೋಕ್ಷಿಸಿದರು. ಆಮೇಲೆ ಕುರಿದನಗಳನ್ನು ವಧಿಸಿ ಅವುಗಳ ರಕ್ತವನ್ನೂ ಬಲಿಪೀಠಕ್ಕೆ ಪ್ರೋಕ್ಷಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು, ಪೀಠದ ಮೇಲೆ ಚಿಮುಕಿಸಿದರು. ಟಗರುಗಳನ್ನು ವಧಿಸಿ ರಕ್ತವನ್ನು ಚಿಮುಕಿಸಿದರು. ಕುರಿಮರಿಗಳನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವುಗಳನ್ನು ವಧಿಸಿ, ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಮೇಲೆ ಚಿಮುಕಿಸಿದರು.