2 Chronicles 29:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಯಾಜಕರು ಹೋತಗಳನ್ನು ಅರಸನ ಮತ್ತು ಸೇರಿಬಂದ ಜನಗಳ ಮುಂದೆ ಪಾಪಪರಿಹಾರಕ ಯಜ್ಞಕ್ಕಾಗಿ ತಂದರು. ಯಾಜಕರು ಅವುಗಳ ಮೇಲೆ ಕೈಯಿಟ್ಟು ವಧಿಸಿದರು. ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಪಾಪಪರಿಹಾರಕ ಯಜ್ಞವಾಗಿ ಸಮರ್ಪಿಸಿದರು. ದೇವರು ಇಸ್ರೇಲರ ಪಾಪಗಳನ್ನು ಕ್ಷಮಿಸುವಂತೆ ಅವರು ಹೀಗೆ ಮಾಡಿದರು. ಸರ್ವಾಂಗಹೋಮಗಳನ್ನೂ ಪಾಪಪರಿಹಾರಕ ಯಜ್ಞಗಳನ್ನೂ ಇಸ್ರೇಲಿನ ಸಮಸ್ತ ಜನರಿಗಾಗಿ ಅರ್ಪಿಸಬೇಕೆಂದು ರಾಜನು ಆಜ್ಞಾಪಿಸಿದ್ದನು. (Verses 23-24)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
Kannada BSI Bible 2016
ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೆಯಲ್ಲಿ ದೋಷಪರಿಹಾರಕಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟನಂತರ
Kannada Bible (KNCL) BSI 2016
ಕಡೆಯಲ್ಲಿ ದೋಷಪರಿಹಾರಕ ಬಲಿಗಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಸಮಾಜದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನು ಚಾಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಮುಂದೆಯೂ, ಸಭೆಯ ಮುಂದೆಯೂ ದೋಷಪರಿಹಾರದ ಬಲಿಗಾಗಿ ತಂದ ಹೋತಗಳನ್ನು ಹತ್ತಿರ ತೆಗೆದುಕೊಂಡು ಬಂದು, ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.