2 Chronicles 29:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
Kannada BSI Bible 2016
ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಾಂಗಹೋಮಸಮರ್ಪಣೆಯು ಪ್ರಾರಂಭಿಸಿದೊಡನೆ ಇಸ್ರಾಯೇಲ್‍ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವದೂ ತುತೂರಿಯೂದುವದೂ ಆರಂಭವಾಯಿತು.
Kannada Bible (KNCL) BSI 2016
ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.