2 Chronicles 29:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
Kannada BSI Bible 2016
ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಹಿಜ್ಕೀಯನೂ ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು ಅವರು ಉತ್ಸಾಹದಿಂದ ಸ್ತುತಿಸುತ್ತಾ ಬೊಗ್ಗಿಕೊಂಡು ನಮಸ್ಕರಿಸಿದರು.
Kannada Bible (KNCL) BSI 2016
ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.